ಪಾಲಿಕ್ಲಿನಿಕ್ ನೂತನ ಕಟ್ಟಡಕ್ಕೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಚಾಲನೆ

ದಿಗಂತ ವರದಿ ಬಳ್ಳಾರಿ:

ನಗರದ ಪಶು ಆಸ್ಪತ್ರೆ ಆವರಣದಲ್ಲಿ ನಿರ್ಮಾಣಗೊಂಡ ಪಾಲಿಕ್ಲೀನಿಕ್ ಕಟ್ಟಡಕ್ಕೆ ಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಶುಕ್ರವಾರ ಚಾಲನೆ ನೀಡಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ಸಂಬಂಧಿಸಿದ ಪಾಲಿ ಕ್ಲಿನಿಕ್‍ನ ನೂತನ ಕಟ್ಟಡ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಜಾನುವಾರುಗಳ ರಕ್ಷಣೆ ಹಾಗೂ ಸಂರಕ್ಷಣೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಸುಸಜ್ಜಿತವಾಗಿ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡ ಈ ಕ್ಲಿನಿಕ್ ಉದ್ಘಾಟನೆಗೊಂಡಿದ್ದು, ಇದರ ಸದುಪಯೋಗವನ್ನು ನಮ್ಮ ರೈತ ಬಾಂಧವರು ಪಡೆದುಕೊಳ್ಳಲು ಮುಂದಾಗಬೇಕು ಎಂದು ಕರೆ ನಿಡಿದರು. ಈ ಸಂದರ್ಭದಲ್ಲಿ ನಗರ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕಾರ್ಕಲತೋಟ ಪಾಲನ್ನ, ವೀರಶೇಖರ್ ರೆಡ್ಡಿ, ಶ್ರೀನಿವಾಸ್ ಮೋತ್ಕರ್, ಕೃಷ್ಣಾ ರೆಡ್ಡಿ, ಸೇರಿದಂತೆ ‌ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕರು, ಸಿಬ್ಬಂದಿಗಳು ಹಾಗೂ ಅಧಿಕಾರಿಗಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!