ಶ್ರೀಲಂಕಾಕ್ಕೆ ಅಗತ್ಯ ಪರಿಹಾರ ಸಾಮಗ್ರಿಗಳ ರವಾನೆ: ಪ್ರಧಾನಿ ಬಳಿ ತಮಿಳುನಾಡು ಸಿಎಂ​ ಪ್ರಸ್ತಾವ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಆರ್ಥಿಕ ಬಿಕ್ಕಟ್ಟಿನಿಂದ ದಿನೇ ದಿನೇ ಕಂಗೆಟ್ಟಿರುವ ಶ್ರೀಲಂಕಾ ದೇಶಕ್ಕೆ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನಿಸುವ ಕುರಿತಾಗಿ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಮೂರು ದಿನಗಳ ದೆಹಲಿ ಪ್ರವಾಸದಲ್ಲಿ ಡಿಎಂಕೆ ಅಧ್ಯಕ್ಷ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ , ಇಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದರು. ಈ ವೇಳೆ ಶ್ರೀಲಂಕಾದ ಆರ್ಥಿಕ ಸಂಕಷ್ಟದ ಬಗ್ಗೆ ಚರ್ಚಿಸಿದ್ದಾರೆ.
ತಮಿಳುನಾಡಿನಿಂದ ಶ್ರೀಲಂಕಾಕ್ಕೆ ಆಹಾರ ಮತ್ತು ವೈದ್ಯಕೀಯ ಸಾಮಗ್ರಿಗಳ ರವಾನಿಸುವ ಬಗ್ಗೆ ಪ್ರಸ್ತಾವನೆ ಮುಂದಿಟ್ಟಿದ್ದಾರೆ.
ಇದಾದ ಬಳಿಕ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಸಾರಿಗೆ ಸಚಿವ ನಿತಿನ್​ ಗಡ್ಕರಿ ಅವರನ್ನು ತಮಿಳುನಾಡು ಸಿಎಂ ಭೇಟಿಯಾದರು. ಗೃಹ ಸಚಿವ ಅಮಿತ್​ ಶಾ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!