ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ನಾಲ್ಕು ದಿನಗಳಲ್ಲಿ ಸಾರಿಗೆ ವ್ಯವಸ್ಥೆ ಸಹಜ ಸ್ಥಿತಿಗೆ ಬರಲಿದೆ. ಹೀಗಾಗಿ ಎಸ್ಮಾ ಜಾರಿ ಮಾಡುವ ಪ್ರಶ್ನೆಯೇ ಉದ್ಘವಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.
ಶುಕ್ರವಾರ 900 ಬಸ್, ಶನಿವಾರ 1500 ಸಂಚರಿಸಿವೆ. ಭಾನುವಾರ 2 ಸಾವಿರ ಬಸ್ಗಳು ಓಡಾಡಲಿವೆ. ಸೋಮವಾರದ ವೇಳೆ ನೌಕರರು ಕರ್ತವ್ಯದ ಮೇಲೆ ಹಾಜರಾಗುವ ವಿಶ್ವಾಸ ಇದೆ.
ಕೆಲ ಚಾಲಕರು, ನಿರ್ವಾಹಕರು ಕರ್ತವ್ಯದ ಮೇಲೆ ಹಾಜರಾಗಲು ಸಿದ್ಧರಿದ್ದೇವೆ ಎಂದು ಕರೆಗಳನ್ನು ಮಾಡುತ್ತಿದ್ದಾರೆ. ನೌಕರರ ಸಂಘದ ಸದಸ್ಯರು ಬೆದರಿಕೆ ಹಾಕುತ್ತಿರುವ ಕಾರಣ ನೌಕರರು ಕೆಲಸಕ್ಕೆ ಹಾಜರಾಗಲು ಹಿಂಜರಿಯುತ್ತಿದ್ದಾರೆ. ನಾಲ್ಕು ದಿನಗಳ ಮುಷ್ಕರದಿಂದಾಗಿ ಈ ತಿಂಗಳು ಸಂಬಳ ಕೊಡಲು ಸಹ ನಿಗಮದ ಬಳಿ ಹಣ ಇಲ್ಲ. ಮತ್ತೆ ಸರ್ಕಾರ ನೆರವಿಗೆ ಬರಬೇಕಾಗಲಿದೆ ಎಂದರು.
‘ಮುಷ್ಕರದಿಂದ ಬಡವರು, ಮಧ್ಯಮ ವರ್ಗದವರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಯಗಾದಿ ಹಬ್ಬಕ್ಕೆ ಊರಿಗೆ ಹೋಗುವವರಿಗೂ ಸಮಸ್ಯೆ ಕಾಡುತ್ತಿದೆ. ಜನಸಾಮಾನ್ಯರ ಕಷ್ಟ ಅರಿತು ಸಾರಿಗೆ ನೌಕರರು ತಕ್ಷಣ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಮನವಿ ಮಾಡಿದರು.