ಹೊಸದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆ ನಿಗದಿಯಾಗಿದ್ದ ಬೆಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿವಿ ಮಾಹಿತಿ ನೀಡಿದೆ.
ಏಪ್ರಿಲ್ 8 ಹಾಗೂ 9 ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ ಮಾಡಿ ಬೆಂಗಳೂರು ವಿವಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಪರೀಕ್ಷೆ ಮುಂದೂಡಲಾಗಿದ್ದು, ಶೀಘ್ರದಲ್ಲೇ ಪರೀಕ್ಷೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಬೆಂಗಳೂರು ವಿವಿ ಮಾಹಿತಿ ನೀಡಿದೆ.