Sunday, April 11, 2021

Latest Posts

ನಾಳೆಯೂ ಮುಂದುವರಿಯಲಿದೆ ಸಾರಿಗೆ ನೌಕರರ ಮುಷ್ಕರ: ಕೋಡಿಹಳ್ಳಿ ಚಂದ್ರಶೇಖರ್‌

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರ ಈಡೇರಿಸದ ಹಿನ್ನೆಲೆಯಲ್ಲಿ ನಾಳೆಯೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕಕರಿಗೆ ಅತ್ಯಂತ ಕಡಿಮೆ ಸಂಬಳ ನೀಡಲಾಗ್ತಿದೆ. ಇಷ್ಟು ಕಡಿಮೆ ಸಂಬಳ ಯಾವ ಸರ್ಕಾರಿ ನೌಕರರಿಗೂ ನೀಡುವುದಿಲ್ಲ. ಈ ತಾರತಾಮ್ಯ ನೀತಿ ಸರಿಯಲ್ಲ. ನೀವು ಕೇವಲ ಮನೆಯಲ್ಲಿ ಕುಳಿತು ಶೇ. 8ರಷ್ಟು ಸಂಬಳ ಜಾಸ್ತಿ ಮಾಡ್ತೇವೆ ಅಂತಾ ಹೇಳ್ತೀರಿ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಬೇಕು ಎಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss