ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣ: BMTC ಯಿಂದ 17.96 ಲಕ್ಷ ದಂಡ ವಸೂಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಎಂಟಿಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ ಪ್ರಯಾಣಿಕರಿಗೆ ತಪಾಸಣಾ ಅಧಿಕಾರಿಗಳು ದಂಡದ ಬಿಸಿ ಮುಟ್ಟಿಸಿದ್ದಾರೆ. ಬರೋಬ್ಬರಿ 8,891 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ರೂ. 17,96,030 ದಂಡ ವಸೂಲಿ ಮಾಡಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತಮ್ಮ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೆಟ್ ನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಆಗಸ್ಟ್ – 2024, ಸೆಪ್ಟೆಂಬರ್ – 2024, ಅಕ್ಟೋಬರ್-2024ರ ಮಾಹೆಗಳಲ್ಲಿ ಒಟ್ಟು 57,219 ಟ್ರಿಪ್‌ಗಳನ್ನು ತಪಾಸಿಸಿ 8,891 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 17,96,030 ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 5268 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 1,178 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 1,17,800 ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94 ರ ಪ್ರಕಾರ ದಂಡ ವಿಧಿಸಲಾಗಿದೆ.

ಒಟ್ಟಾರೆಯಾಗಿ 10,069 ಪ್ರಯಾಣಿಕರಿಂದ ಒಟ್ಟು ರೂ. 19,13,830 ದಂಡವನ್ನು ವಸೂಲಿ ಮಾಡಲಾಗಿದೆ ಎಂದು ಹೇಳಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೆಟ್ , ದಿನದ ಪಾಸು ,ವಾರದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಕೋರಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!