Thursday, July 7, 2022

Latest Posts

ಭಾರೀ ಮಳೆಗೆ ಧರೆಗುರುಳಿದ ಮರ: ಎರಡು ಮನೆ, ಬೈಕ್ ಭಾಗಶಃ ಜಖಂ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:

ನಗರದಲ್ಲಿ ಸತತವಾಗಿ ಮಳೆ ಸುರಿದ ಪರಿಣಾಮ ನಗರದ ಗೋಕುಲ ರಸ್ತೆಯಲ್ಲಿನ ರೇಣುಕಾನಗರದ 7 ನೇ ಕ್ರಾಸ್​​ನಲ್ಲಿ ಬೃಹತ್ ಗಾತ್ರದ ಮರ ಬುಡಸಮೇತ ಉರುಳಿಬಿದ್ದಿದೆ. ಹೀಗಾಗಿ ಅಕ್ಕಪಕ್ಕದ ಎರಡು ಮನೆಗಳು, ಬೈಕ್ ಭಾಗಶಃ ಜಖಂ ಆಗಿವೆ.

ಲಾಕ್​ಡೌನ್​ ಇರುವುದರಿಂದ ಮನೆ ಜನಸಂಚಾರ ಕಡಿಮೆ ಇದೆ. ಹೀಗಾಗಿ ಭಾರಿ ಅನಾಹುತ ತಪ್ಪಿದೆ. ಮರ ಬಿದ್ದಿದ್ದರಿಂದ ವಾಹನಗಳಿಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಅನೇಕ ದಿನಗಳಿಂದ ಬೃಹತ್​​ ಮರಗಳನ್ನು(ದೀರ್ಘಾವಧಿಯ ಮರ) ತೆಗೆಯಲು ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಏನು ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss