ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ- ಉಡುಪಿ ರಾಜ್ಯ ಹೆದ್ದಾರಿಯಲ್ಲಿ ಬರುವ ಕಡಬ ತಾಲೂಕು ನೂಜಿ ಬಾಳ್ತಿಲ ಎಂಬಲ್ಲಿ ಚಲಿಸುತ್ತಿರುವ ಕಾರಿನ ಮೇಲೆ ಮರ ಉರುಳಿ ನಾಲ್ವರು ಗಾಯಗೊಂಡಿದ್ದಾರೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಈ ಕಾರು, ಕುಕ್ಕೆ ಸುಬ್ರಹ್ಮಣ್ಯದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳ ಕಡೆಗೆ ತೆರಳುತ್ತಿತ್ತು. ನೂಜಿ ಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಕಾರು ತಲುಪುತ್ತಿದ್ದಂತೆಯೇ ಮರ ಉರುಳಿಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಒಂದು ಮಗು ಹಾಗೂ ಚಾಲಕ ಕಾರಿನಲ್ಲಿಯೇ ಸಿಲುಕಿಕೊಂಡಿದ್ದರು. ಬಳಿಕ ಸ್ಥಳೀಯರ ಕಾರ್ಯಾಚರಣೆಯಲ್ಲಿ ಅವರನ್ನು ಹೊರಕ್ಕೆಳೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.