ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಪರಿಸರವಾದಿ, ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಉಸಿರಾಟದ ತೊಂದರೆ, ಸೋಂಕಿನ ಸಮಸ್ಯೆಯಿಂದಾಗಿ ನವೆಂಬರ್ 30ರಂದು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಸಾಲು ಮರದ ತಿಮ್ಮಕ್ಕ ಅವರು ಗ್ಯಾಸ್ಟ್ರೋ ಇಂಟಸ್ಟೈನಲ್ ಸೋಂಕು, ಅತಿಸಾರ ಮತ್ತು ನಿರ್ಜಲೀಕರಣದಿಂದ ಬಳಲುತ್ತಿದ್ದರು. ಕೆಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದೆ. ನಾಳೆ ಡಿಸ್ಚಾರ್ಜ್ ಮಾಡಬಹುದು ಎನ್ನಲಾಗಿದೆ.