Monday, September 8, 2025

ಚಾರ್ಮಾಡಿ ಫಾಟಿಯ ನಿಷೇಧಿತ ಪ್ರದೇಶಕ್ಕೆ ಟ್ರೆಕ್ಕಿಂಗ್: ಬೆಂಗಳೂರಿನ 103 ಪ್ರವಾಸಿಗರು ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾರ್ಮಾಡಿ ಫಾಟಿಯ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮುಡಿಗೇರಿ ತಾಲೂಕಿನ ಬಿದರಿತಳ ಗ್ರಾಮದಲ್ಲಿ ಬೆಂಗಳೂರು ಮೂಲದ 103 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಪ್ರದೇಶಕ್ಕೆ ಪ್ರವಾಸಿಗರನ್ನು ಟ್ರಕ್ಕಿಂಗ್ ಗೆ ಕರೆದೊಯ್ದಿದ್ದರು. ಎರಡು ಬಸ್ ಮೂರು ಪಿಕಪ್ ವಾಹನಗಳು ಸಹ ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಟೂರಿಸ್ಟ್ ಪ್ಯಾಕೇಜ್ ಅಡಿ ಟೆಕ್ಕಿಗಳು ಪ್ರವಾಸಕ್ಕೆ ಬಂದಿದ್ದರು. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ