ಟೀಂ ಇಂಡಿಯಾ ವಿರುದ್ಧದ ಟಿ20, ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟ:‌ ಟ್ರೆಂಟ್‌ ಬೌಲ್ಟ್, ಗಪ್ಟಿಲ್ ಗೆ ಕೋಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಐಸಿಸಿ ಟಿ20 ವಿಶ್ವಕಪ್ ನಲ್ಲಿ ಕಹಿ ಅನುಭವಿಸಿದ ಎರಡು ತಂಡಗಳಾದ ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ಇದೇ 18 ರಿಂದ ಮುಖಾಮುಖಿಯಾಗಲಿವೆ. ಈ ಎರಡು ತಂಡಗಳ ನಡುವೆ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯನ್ನು ಆಯೋಜಿಸಲಾಗಿದೆ. ಈ ಸರಣಿಗೆ ಇದೀಗ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದ್ದು ತನ್ನ ಇಬ್ಬರು ಸ್ಟಾರ್ ಆಟಗಾರರನ್ನು ಕೈಬಿಟ್ಟಿದೆ.
ತಂಡದ ಅನುಭವಿ ಆಟಗಾರರಾದ ಟ್ರೆಂಟ್ ಬೌಲ್ಟ್ ಹಾಗೂ ಮಾರ್ಟಿನ್ ಗಪ್ಟಿಲ್ ಅವರನ್ನು ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಸರಣಿಗಾಗಿ ಬ್ಲ್ಯಾಕ್‌ಕ್ಯಾಪ್ಸ್ 13 ಸದಸ್ಯರ ತಂಡವನ್ನು ಘೋಷಿಸಿದ್ದು, ಕೇನ್ ವಿಲಿಯಮ್ಸನ್ ಎರಡೂ ಮಾದರಿಗಳಲ್ಲಿ ತಮ್ಮ ನಾಯಕತ್ವವನ್ನು ಉಳಿಸಿಕೊಂಡಿದ್ದಾರೆ. ಗಪ್ಟಿಲ್ ಅವರ ಸ್ಥಾನದಲ್ಲಿ ಯುವ ಆರಂಭಿಕ ಬ್ಯಾಟರ್ ಫಿನ್ ಅಲೆನ್ ಅವರನ್ನು ಆಯ್ಕೆ ಮಾಡಲಾಗಿದೆ. ಬೌಲರ್ ಬೌಲ್ಟ್ ಅವರು ನ್ಯೂಜಿಲೆಂಡ್ ಕ್ರಿಕೆಟ್‌ನೊಂದಿಗಿನ ಕೇಂದ್ರ ಒಪ್ಪಂದದಿಂದ ಬಿಡುಗಡೆ ಮಾಡಲು ಕೇಳಿಕೊಂಡ ಬಳಿಕ ಹೆಚ್ಚಿನ ಸರಣಿಗಳಲ್ಲಿ ಅವರು ಕಾಣಿಸಿಕೊಳ್ಳುತ್ತಿಲ್ಲ.
50-ಓವರ್‌ಗಳ ವಿಶ್ವಕಪ್‌ಗೆ ಒಂದು ವರ್ಷಕ್ಕಿಂತ ಕಡಿಮೆ ಸಮಯ ಇರುವುದರಿಂದ ನಾವು ಫಿನ್‌ಗೆ ಅಲೆನ್‌ ಗೆ ಏಕದಿನ ಅನುಭವವನ್ನು ಪಡೆದುಕೊಳ್ಳಲು ಪ್ರತಿಯೊಂದು ಅವಕಾಶವನ್ನು ನೀಡಲು ಉತ್ಸುಕರಾಗಿದ್ದೇವೆ. ವಿಶೇಷವಾಗಿ ಭಾರತದಂತಹ ಗುಣಮಟ್ಟದ ವಿರೋಧದ ವಿರುದ್ಧ. ತಂಡದಿಂದ ಹೊರಬಿದ್ದ ಆಟಗಾರರಿಗೆ ಸಂದೇಶವೆಂದರೆ ಮುಂದೆ ಸಾಕಷ್ಟು ಅಂತರರಾಷ್ಟ್ರೀಯ ಕ್ರಿಕೆಟ್ ಇದೆ ಮತ್ತು ಅವರಿಗೆ ಬಾಗಿಲು ಖಂಡಿತವಾಗಿಯೂ ಮುಚ್ಚಿಲ್ಲ, ಎಂದು ಕಿವಿಸ್‌ ಕ್ರಿಕೆಟ್‌ ಮಂಡಳಿ ಹೇಳಿದೆ.
ನ್ಯೂಜಿಲೆಂಡ್ ಏಕದಿನ ತಂಡ:
ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಡೇರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಮ್ಯಾಟ್ ಹೆನ್ರಿ.

ನ್ಯೂಜಿಲೆಂಡ್ ಟಿ20 ತಂಡ:
ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್, ಆಡಮ್ ಮಿಲ್ನೆ, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಇಶ್ ಸೋಧಿ, ಬ್ಲೇರ್ ಟಿಕ್ನರ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!