ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಧಾರವಾಡದ ನಡುವೆ ಸಂಚರಿಸಲಿರುವ ವಂದೇ ಭಾರತ್ ರೈಲು ಇಂದು ಪ್ರಾಯೋಗಿಕ ರೈಲು ಸಂಚಾರ ಆರಂಭಿಸಿದೆ.
ಈ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಲ್ಹಾದ ಜೋಶಿ, ಕೆಲವೇ ದಿನಗಳಲ್ಲಿ ವಂದೇ ಭಾರತ್ ರೈಲು ಸೇವೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಎರಡನೇ ವಂದೇ ಭಾರತ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಲವೇ ದಿನಗಳಲ್ಲಿ ಚಾಲನೆ ನೀಡಲಿದ್ದಾರೆ ಎಂಬ ಮಾಹಿತಿ ಕೂಡ ನೀಡಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬೆಳಗ್ಗೆ 9.45ಕ್ಕೆ ದಾವಣಗೆರೆ, 12.10ಕ್ಕೆ ಹುಬ್ಬಳ್ಳಿ, 12.40ಕ್ಕೆ ಧಾರವಾಡ ತಲುಪಲಿದೆ. 1.35ಕ್ಕೆ ಹುಬ್ಬಳ್ಳಿಗೆ, 3.48ಕ್ಕೆ ದಾವಣಗೆರೆಗೆ, ರಾತ್ರಿ 7.45ಕ್ಕೆ ಯಶವಂತಪುರ ಬಂದು ರಾತ್ರಿ 8.10ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.