ಹೊಸದಿಗಂತ ಡಿಜಿಟಲ್ ಡೆಸ್ಕ್:
14 ವರ್ಷದ ಬುಡಕಟ್ಟು ವಿದ್ಯಾರ್ಥಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಪೊಲೀಸರು ಭುವನೇಶ್ವರ ಮೂಲದ ಕಳಿಂಗ ಸಮಾಜ ವಿಜ್ಞಾನ ಸಂಸ್ಥೆಯ (KISS) ಮೂವರು ಬಾಲಾಪರಾಧಿಗಳು, ಎಂಟು ಶಿಕ್ಷಕರು ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೌಚಾಲಯದಲ್ಲಿ ತನ್ನ ಬಕೆಟ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಬಾಲಕನನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಮೂವರು ಬಾಲಾಪರಾಧಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರ ಮೇಲೆ ಸೆಕ್ಷನ್ 106(1) ಬಿಎನ್‌ಎಸ್ ಮತ್ತು 2015 ರ ಬಾಲ ನ್ಯಾಯ ಕಾಯ್ದೆಯ ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಘಟನೆಯನ್ನು ಯಾರಿಗೂ ಹೇಳದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಕ್ಕಾಗಿ, ಸಾಕ್ಷ್ಯಗಳನ್ನು ನಾಶಪಡಿಸಿದ್ದಕ್ಕಾಗಿ ಮತ್ತು ಅಪರಾಧಿಗಳಿಗೆ ಆಶ್ರಯ ನೀಡಿದ್ದಕ್ಕಾಗಿ ಹೆಚ್ಚುವರಿ ಸಿಇಒ ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಕೆಐಎಸ್ಎಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

