ರಸ್ತೆ ಅಪಘಾತದಲ್ಲಿ ಹುತಾತ್ಮರಾದ 16 ಸೈನಿಕರಿಗೆ ಗೌರವ ನಮನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಪಶ್ಚಿಮ ಬಂಗಾಳದ ಬಾಗ್ಡೋಗ್ರಾದಲ್ಲಿ ರಸ್ತೆ ಅಪಘಾತದಲ್ಲಿ ಹುತಾತ್ಮರಾದ 16 ಸೈನಿಕರಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಉತ್ತರ ಸಿಕ್ಕಿಂನ ಝೀಮಾದಲ್ಲಿ ನಿನ್ನೆ ರಸ್ತೆ ಅಪಘಾತ ಸಂಭವಿಸಿತ್ತು.

ಗೌರವ ನಮನ ಸಲ್ಲಿಸಿದ ಬಳಿಕ ಸೈನಿಕರ ಪಾರ್ಥಿವ ಶರೀರಗಳನ್ನು ಅವರವರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.
ಉತ್ತರ ಸಿಕ್ಕಿಂನ ಜೆಮಾದಲ್ಲಿಇಳಿಜಾರಿನಲ್ಲಿ ಪ್ರಯಾಣಿಸುತ್ತಿದ್ದ ಸೇನಾ ವಾಹನ ಶುಕ್ರವಾರ ನಿಯಂತ್ರಣ ತಪ್ಪಿ ಕಮರಿ ಬಿದ್ದಿತ್ತು. ಪರಿಣಾಮ ಮೂವರು ಸೇನಾ ಅಧಿಕಾರಿಗಳು ಸೇರಿದಂತೆ 1೬ ಯೋಧರು ಹುತಾತ್ಮರಾಗಿದ್ದರು.

ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಕೈಗೊಂಡ ಸೇನಾ, ಗಾಯಗೊಂಡ ನಾಲ್ವರು ಯೋಧರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!