ಪದ್ಮಶ್ರೀ ಪುರಸ್ಕೃತ ರಾಣಿ ಮಾಚಯ್ಯರಿಗೆ ಸನ್ಮಾನ

ಹೊಸದಿಗಂತ ವರದಿ ಮಡಿಕೇರಿ:

ಯುವ ಸಮೂಹಕ್ಕೆ ಕೊಡವ ಸಂಸ್ಕೃತಿಯನ್ನು ಕರಗತ ಮಾಡಿಕೊಡುವ ಮೂಲಕ ಕೊಡಗಿನ ಕಲೆ, ಆಚಾರ-ವಿಚಾರಗಳು ದೇಶ, ವಿದೇಶಗಳಲ್ಲಿ ಪರಿಚಯವಾಗುವಂತೆ ಮಾಡಲು ಸಾಕಷ್ಟು ಶ್ರಮವಹಿಸಿದ ಹಿರಿಯ ಕಲಾವಿದೆ ಹಾಗೂ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ ಅವರನ್ನು‌ ಮಡಿಕೇರಿಯಲ್ಲಿ ಸನ್ಮಾನಿಸಲಾಯಿತು.

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!