ಪ್ರಧಾನಿ ಟ್ವಿಟರ್​, ಇನ್​ಸ್ಟಾಗ್ರಾಂ ಡಿಪಿ ಯಲ್ಲಿ ಹಾರಾಡುತ್ತಿದೆ ತ್ರಿವರ್ಣ ಧ್ವಜ: ನೀವೂ ಇದಕ್ಕೆ ಸಾಥ್​ ನೀಡಿ ಎಂದ ಮೋದಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

‘ಆಜಾದಿ ಕಾ ಅಮೃತ್ ಮಹೋತ್ಸವ’ ಅಂಗವಾಗಿ ದೇಶದಲ್ಲಿ ಇಂದಿನಿಂದ ಹರ್​ ಘರ್​ ತಿರಂಗಾ ಅಭಿಯಾನ ಆರಂಭಿಸಲಾಗಿದೆ. ಪ್ರತಿ ಮನೆಯ ಮೇಲೆ ಆಗಸ್ಟ್​ 2 ರಿಂದ 15 ರವರೆಗೆ ತ್ರಿವರ್ಣ ಧ್ವಜ ಹಾರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಯಲ್ಲಿ ಕೇಳಿಕೊಂಡಿದ್ದರು.

ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ‘ತ್ರಿವರ್ಣ ಧ್ವಜ’ವನ್ನು ಪ್ರೊಫೈಲ್ ಚಿತ್ರವಾಗಿ ಬಳಸುವಂತೆ ಪ್ರಧಾನಿ ಕರೆ ನೀಡಿದ್ದರು.
ಇದೀಗ ಖುದ್ದು ಮೋದಿ ಅವರೇ ತಮ್ಮ ಟ್ವಿಟರ್​, ಇನ್​ಸ್ಟಾಗ್ರಾಮ್​ ಖಾತೆಯ ಡಿಪಿ ಬದಲಿಸಿದ್ದು, ತ್ರಿವರ್ಣ ಧ್ವಜದ ಡಿಪಿ ಹಾಕಿಕೊಂಡಿದ್ದಾರೆ. ಈ ಕುರಿತು ಟ್ವೀಟ್​ ಕೂಡ ಮಾಡಿದ್ದಾರೆ ಪ್ರಧಾನಿ ಮೋದಿ. ‘ಇಂದು ವಿಶೇಷವಾದ ದಿನ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊಸ್ತಿಲಲ್ಲಿದ್ದೇವೆ. ಎಲ್ಲರೂ ಈ ಸಂಭ್ರಮ ಆಚರಿಸೋಣ. ತ್ರಿವರ್ಣ ಧ್ವಜವನ್ನು ಸಾಮೂಹಿಕವಾಗಿ ಹಾರಿಸುವ ಮೂಲಕ ಸಂಭ್ರಮ ಇಮ್ಮಡಿಗೊಳಿಸೋಣ. ಸಾಮಾಜಿಕ ಜಾಲತಾಣಗಳ ಡಿಪಿಯನ್ನು ನಾನು ಬದಲಿಸಿದ್ದೇನೆ. ನೀವು ಕೂಡ ಬದಲಿಸಿ ಎಂದು ಹೇಳಿದ್ದಾರೆ.
ಆಗಸ್ಟ್​ 2 ಅನ್ನೇ ಆಯ್ಕೆ ಮಾಡಿಕೊಂಡಿರುವ ಕಾರಣ ಎಂದರೆ, ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದ ಪಿಂಗಲಿ ವೆಂಕಯ್ಯ ಅವರ ಜನ್ಮದಿನ ಎಂಬುದು. ಈ ನಿಮಿತ್ತ ಪ್ರಧಾನಿ ಮೋದಿ ಅವರು ಪಿಂಗಲಿ ವೆಂಕಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ನಮಗೆ ತ್ರಿವರ್ಣ ಧ್ವಜವನ್ನು ನೀಡಿರುವ ತಮಗೆ ನಮ್ಮ ದೇಶ ಅವರಿಗೆ ಸದಾ ಋಣಿಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಮ್ಮ ತ್ರಿವರ್ಣ ಧ್ವಜದ ಬಗ್ಗೆ ನಮಗೆ ತುಂಬಾ ಹೆಮ್ಮೆ ಇದೆ. ತ್ರಿವರ್ಣ ಧ್ವಜದಿಂದ ಶಕ್ತಿ ಮತ್ತು ಸ್ಫೂರ್ತಿ ಪಡೆದು, ನಾವು ರಾಷ್ಟ್ರದ ಪ್ರಗತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಬೇಕೆಂದು ಬಯಸುತ್ತೇನೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!