ಇಂದೋರ್‌ನಲ್ಲಿ ಪಾದಚಾರಿ ಮಾರ್ಗಗಳಿಗೆ ತಿರಂಗಾ : ಎಲ್ಲೆಡೆ ಆಕ್ರೋಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

17 ನೇ ಪ್ರವಾಸಿ ಭಾರತೀಯ ದಿನದ ಉದ್ಘಾನಟೆಗೆ ಮಧ್ಯಪ್ರದೇಶದ ಇಂದೋರ್ ನಗರ ಸಜ್ಜಾಗಿದ್ದು, ಪ್ರಧಾನಿ ಮೋದಿ ಅವರ ಸ್ವಾಗತಕ್ಕೆ ಭರ್ಜರಿ ತಯಾರಿ ನಡೆದಿದೆ.

ಈ ಮಧ್ಯೆ ಪಾದಚಾರಿ ಮಾರ್ಗಕ್ಕೆ ತ್ರಿವರ್ಣ ಬಳಿದಿರುವ ವಿಚಾರಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೂಡಿಕೆದಾರರು ಮತ್ತು ಎನ್‌ಆರ್‌ಐ ಶೃಂಗಸಭೆಯ ಪೂರ್ವಭಾವಿ ಸಿದ್ಧತೆಗಳನ್ನು ತೋರಿಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದರಲ್ಲಿ ಪಾದಚಾರಿ ಮಾರ್ಗಗಳಿಗೆ ಕೇಸರಿ, ಬಿಳಿ, ಹಸಿರು ಬಣ್ಣ ಬಳಿದಿರುವ ದೃಶ್ಯ ಕಾಣುತ್ತದೆ.

ಜನರು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಷ್ಟ್ರಧ್ವಜಕ್ಕೆ ಇದು ಅವಮಾನ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಮೆಚ್ಚಿಸುವ ಭರದಲ್ಲಿ ಸರ್ಕಾರ ಎಡವಟ್ಟು ಮಾಡಿದೆ ಎನ್ನುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!