Sunday, December 3, 2023

Latest Posts

ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಶಾಸಕಿ ಮೇಲೆ ಕಲ್ಲು ತೂರಲು ಯತ್ನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಶಾಸಕಿ ಮೇಲೆ ಕಲ್ಲು ತೂರಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಜಿಲ್ಲೆಯ ಕೆಜಿಎಫ್ ತಾಲೂಕಿನ ಬೇತಮಂಗಲದಲ್ಲಿ ಶಾಸಕಿ ರೂಪಕಲಾ ಶಶಿಧರ್ ನೇತೃತ್ವದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಶಾಸಕಿ ಹಾಗೂ ಜೆಸಿಬಿ ಮೇಲೆ ಕಲ್ಲು ಎಸೆಯಲು ವ್ಯಕ್ತಿಯೊಬ್ಬ ಮುಂದಾಗಿದ್ದಾನೆ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ತಡೆದು ಅನಾಹುತ ತಪ್ಪಿಸಿದ್ದಾರೆ. ಕಲ್ಲು ತೂರಾಟ ನಡೆಸಲು ಮುಂದಾಗಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!