ಹೊಸದಿಗಂತ ಡಿಜಿಟಲ್ ಡೆಸ್ಕ್:
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಜಿಯಾರುಲ್ ಮೊಲ್ಲಾ ಎಂಬುವವರು ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯ ಬಸಂತಿ ಗ್ರಾಮದ ರಸ್ತೆಯೊಂದರಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಅವರಿಗೆ ನಿರಂತರ ಜೀವ ಬೆದರಿಕೆ ಬರುತ್ತಿತ್ತು. ರಾಜಕೀಯ ವಿಚಾರಕ್ಕಾಗಿ ಹತ್ಯೆ ನಡೆಸಲಾಗಿದೆ ಎಂದು ಕುಟುಂಬಸ್ಥರು ಪೊಲೀಸರ ಬಳಿ ಆರೋಪ ಮಾಡಿದ್ದಾರೆ. ಘಟನೆಯ ಕುರಿತಾಗಿ ತನಿಖೆಗಳು ನಡೆಯುತ್ತಿವೆ.