ಕಾಂಗ್ರೆಸ್ ಪಕ್ಷದ ಪ್ರತಿಭಟನೆಗೆ ದಿಢೀರ್ ಎಂಟ್ರಿ ಕೊಟ್ಟ ತೃಣಮೂಲ ಕಾಂಗ್ರೆಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಅಂತರ ಕಾಯ್ದುಕೊಳ್ಳುತ್ತಿದ್ದ ತೃಣಮೂಲ ಕಾಂಗ್ರೆಸ್, ಕೈ ನಾಯಕರು ಕೈಗೊಂಡಿರುವ ಪ್ರತಿಭಟನೆಗೆ ಬೆಂಬಲ ನೀಡಿದ್ದಲ್ಲದೆ, ಅವರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದೆ. ರಾಹುಲ್ ಗಾಂಧಿ ಅನರ್ಹತೆ ಸೇರಿದಂತೆ ಅದಾನಿ ಗ್ರೂಪ್ ಪ್ರಕರಣದಲ್ಲಿ ಪಕ್ಷವು ಜೆಪಿಸಿಗೆ ಒತ್ತಾಯಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಸೋಮವಾರ ಸಂಸತ್ತಿನ ಎದುರು ಪ್ರತಿಭಟನೆ ನಡೆಸಿದರು. ಕಪ್ಪು ಬಟ್ಟೆ, ಕಪ್ಪು ಬಾವುಟ ಹಿಡಿದು ಪ್ರಜಾಪ್ರಭುತ್ವ ರಕ್ಷಿಸುವಂತೆ ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಟಿಎಂಸಿ ಸಂಸದರು ಭಾಗವಹಿಸಿದ್ದರು.

ಮುಂಬರುವ ಚುನಾವಣೆಗೆ ರಂಗ ಸಿದ್ದತೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಪಕ್ಷ ರಹಿತ ರಂಗ ರಚಿಸುವುದಾಗಿ ಘೋಷಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಪ್ರತಿಭಟನೆಗೆ ಕೈಜೋಡಿಸಿದ್ದು, ಅದಕ್ಕೂ ಮುನ್ನ ಟಿಎಂಸಿ ಸಂಸದರಾದ ಪ್ರಸೂನ್ ಬ್ಯಾನರ್ಜಿ ಮತ್ತು ಜವಾಹರ್ ಸರ್ಚಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಕಾರ್ಯತಂತ್ರ ಸಭೆಯಲ್ಲಿ ಭಾಗವಹಿಸಿದ್ದರು ಎಂಬುದು ಗಮನಾರ್ಹ.

ಕಾಂಗ್ರೆಸ್ ಮುಖ್ಯಸ್ಥ ಖರ್ಗೆ ಪ್ರತಿಕ್ರಿಯಿಸಿ, ನಮ್ಮ ಪ್ರತಿಭಟನೆಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು. ಸಾರ್ವಜನಿಕ ಕಲ್ಯಾಣ ಮತ್ತು ಸುರಕ್ಷತೆ ನಮ್ಮ ಧ್ಯೇಯವಾಗಿದೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಯಾರು ಮುಂದೆ ಬಂದರೂ ನಾವು ಸ್ವಾಗತಿಸುತ್ತೇವೆ. ಈ ಪ್ರತಿಭಟನೆಯಲ್ಲಿ ತೆಲಂಗಾಣದಲ್ಲಿ ವಿರೋಧ ಪಕ್ಷವಾಗಿರುವ ಭಾರತ್ ರಾಷ್ಟ್ರ ಸಮಿತಿ ಸಂಸದರೂ ಪಾಲ್ಗೊಂಡಿರುವುದು ಗಮನಾರ್ಹ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಕೂಡ ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!