ಹೊಸದಿಗಂತ ಡಿಜಿಟಲ್ ಡೆಸ್ಕ್;
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಅನಿತಾ ಬಸೋಯಾ, ನಿಖಿಲ್ ಚಪ್ರಾಣ , ಧರಂವೀರ್ ಅವರು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಮೂವರ ಜೊತೆ ಮಾಜಿ ಆಪ್ ಜಿಲ್ಲಾ ಅಧ್ಯಕ್ಷ ಸಂದೀಪ್ ಸೇರ್ಪಡೆಯಾಗಿದ್ದಾರೆ.
ಈ ಮೂವರು ಅಲ್ಲದೇ ಇನ್ನು ಕೆಲವು ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಮುಂದಿನ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಚುನಾವಣೆಯನ್ನು ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ.
14 ರ ಪೈಕಿ 10 ಶಾಸಕರು ಮತದಾನ ಹಕ್ಕನ್ನು ಹೊಂದಿರುವ ಕಾರಣ ಮೇಯರ್ ಚುನಾವಣೆಯನ್ನು ಬಿಜೆಪಿ ಗೆಲ್ಲಬಹದು ಎನ್ನಲಾಗುತ್ತಿದೆ.
ಮಾರ್ಚ್‌ನಲ್ಲಿ ದೆಹಲಿಯಲ್ಲಿ ಮೇಯರ್ ಚುನಾವಣೆ ನಡೆಯಲಿದೆ. ಈ ಚುನಾವಣೆ ಗೆದ್ದರೆ ರಾಜಧಾನಿಯಲ್ಲಿ ಟ್ರಿಪಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದಂತೆ ಆಗುತ್ತದೆ.