ತ್ರಿಪುರ ಬಿಜೆಪಿ ಜಯಭೇರಿ: ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಅಪ್ಪಯ್ಯ ಮಣಿಯಾಣಿ, ರಾಜೇಶ್ ಬನ್ನೂರು, ರಾಧಾಕೃಷ್ಣ ಬೋರ್ಕರ್, ವಿದ್ಯಾಗೌರಿ, ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!