ಎರಡು ಬಂಡುಕೋರ ಗುಂಪುಗಳ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ತ್ರಿಪುರಾ, ಕೇಂದ್ರ ಸರ್ಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಿಂಸಾಚಾರವನ್ನು ಕೊನೆಗೊಳಿಸಿ ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸುವ ಉದ್ದೇಶದಿಂದ ನಾರ್ತ್ ಬ್ಲಾಕ್‌ನಲ್ಲಿ ಕೇಂದ್ರ ಮತ್ತು ತ್ರಿಪುರಾ ಸರ್ಕಾರ ರಾಜ್ಯದ ಎರಡು ಬಂಡುಕೋರ ಗುಂಪುಗಳ ನಡುವೆ ಶಾಂತಿ ಒಪ್ಪಂದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿ ಹಾಕಿದರು.

ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈಶಾನ್ಯ ಪ್ರದೇಶ ವಿಶೇಷವಾಗಿ ಬುಡಕಟ್ಟು ಜನಾಂಗದವರ ಸಂಸ್ಕೃತಿ, ಭಾಷೆ ಮತ್ತು ಗುರುತನ್ನು ಉಳಿಸಿಕೊಂಡು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈಶಾನ್ಯ ಮತ್ತು ದೆಹಲಿ ನಡುವಿನ ಅಂತರವನ್ನು ರಸ್ತೆಗಳು, ರೈಲುಗಳು ಮತ್ತು ವಿಮಾನಗಳ ಮೂಲಕ ಸಂಪರ್ಕಿಸುವುದು ಮಾತ್ರವಲ್ಲದೆ ಹೃದಯಗಳ ನಡುವಿನ ಅಂತರವನ್ನು ಕಡಿಮೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಒಪ್ಪಂದಕ್ಕೆ ಸಹಿ ಹಾಕುವುದರೊಂದಿಗೆ ಶಾಂತಿ ಮತ್ತು ಪ್ರಗತಿಯತ್ತ ಸಾಗುತ್ತಿರುವ ತ್ರಿಪುರಾದ ಪ್ರಯಾಣದಲ್ಲಿ ಇಂದು ಹೊಸ ಮೈಲಿಗಲ್ಲು ಸ್ಥಾಪಿಸಲಾಗಿದೆ. ಎನ್‌ಎಲ್‌ಎಫ್‌ಟಿ ಮತ್ತು ಎಟಿಟಿಎಫ್ 35 ವರ್ಷಗಳ ಸುದೀರ್ಘ ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಮುಖ್ಯವಾಹಿನಿಗೆ ಮರಳಲು ಒಪ್ಪಿಕೊಂಡಿವೆ. ಹಿಂಸಾಚಾರವನ್ನು ತ್ಯಜಿಸಿ ಸಮೃದ್ಧ ಮತ್ತು ಅಭಿವೃದ್ಧಿ ಹೊಂದಿದ ತ್ರಿಪುರವನ್ನು ನಿರ್ಮಿಸಲು ಬದ್ಧವಾಗಿವೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ(NLFT) ಮತ್ತು ಆಲ್ ತ್ರಿಪುರಾ ಟೈಗರ್ ಫೋರ್ಸ್(ಎನ್‌ಎಲ್‌ಎಫ್‌ಟಿ) ಪ್ರತಿನಿಧಿಗಳೊಂದಿಗೆ ಶಾಂತಿ ಒಪ್ಪಂದದ ಜ್ಞಾಪಕ ಪತ್ರಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಮತ್ತು ಗೃಹ ವ್ಯವಹಾರಗಳ ಸಚಿವಾಲಯ(ಎಂಎಚ್‌ಎ)ದ ಅಧಿಕಾರಿಗಳು, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಹ ಉಪಸ್ಥಿತರಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!