ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ರಾಜೀನಾಮೆ: ಮುಂದಿನ ಸಿಎಂ ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್‌ :

ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿಯಾಗಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಆದ್ರೆ ಅವರು ಮುಂದಿನ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿಲ್ಲ. ಇದರಿಂದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರ ಪಕ್ಷವಾದ ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್ಟಿ) ಕ್ರಮವಾಗಿ 32 ಸ್ಥಾನ ಮತ್ತು ಒಂದು ಕ್ಷೇತ್ರವನ್ನು ಗೆದ್ದು, ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳುತ್ತಿದೆ.

ರಾಜಭವನದಿಂದ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಣಿಕ್ ಸಹಾ, ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ನೂತನ ಸರ್ಕಾರ ರಚನೆಯಾಗುವವರೆಗೂ ಮುಂದುವರೆಯುವಂತೆ ರಾಜ್ಯಪಾಲರು ಸೂಚಿಸಿರುವುದಾಗಿ ಹೇಳಿದರು.
ಮಾರ್ಚ್ 8 ರಂದು ನೂತನ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಅವರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!