September 16, 2026
Wednesday, September 16, 2026
spot_img

ಮಳೆಯ ಆರ್ಭಟಕ್ಕೆ ತ್ರಿಪುರಾ ಕಂಗಾಲು: ಪ್ರವಾಹ, ಭೂಕುಸಿತದ ಭೀತಿ; 11 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿರಂತರ ಮಳೆಯಿಂದ ತ್ರಿಪುರಾದ ಹಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮೂರು ಜಿಲ್ಲೆಗಳು ತೀವ್ರ ಪರಿಣಾಮ ಎದುರಿಸಿವೆ. ಸುಮಾರು 11 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಮೂರು ಜಿಲ್ಲೆಗಳಲ್ಲಿ ಪ್ರವಾಹದ ಸಂಕಷ್ಟ

ಉನಕೋಟಿ, ಧಲೈ ಮತ್ತು ಖೋವೈ ಜಿಲ್ಲೆಗಳ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಒಟ್ಟು 10,977 ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.

ಇದನ್ನೂ ಓದಿ:

ಸಾವಿರಾರು ಮನೆಗಳಿಗೆ ಹಾನಿ

ಪ್ರವಾಹದಿಂದ 4,000ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಕೃಷಿ ಭೂಮಿ, ಬೆಳೆಗಳು ಹಾಗೂ ಸಾರ್ವಜನಿಕ ಆಸ್ತಿಗಳಿಗೂ ನೀರು ನುಗ್ಗಿ ಸಾಕಷ್ಟು ನಷ್ಟ ಉಂಟಾಗಿದೆ. ಈ ಅವಘಡದಲ್ಲಿ ಒಬ್ಬ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ವರದಿಯಾಗಿದೆ.

ಐಎಂಡಿಯಿಂದ ಭಾರೀ ಮಳೆ ಎಚ್ಚರಿಕೆ

ಜುಲೈ 12ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನದಿ ತೀರ ಹಾಗೂ ಗುಡ್ಡಗಾಡು ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಎಂದು ಆಡಳಿತ ಸೂಚಿಸಿದ್ದು, ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಮನವಿ ಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !