July 29, 2026
Wednesday, July 29, 2026
spot_img

ಮತ ಎಣಿಕೆ ದಿನವೇ ತಿರುಪತಿಯಲ್ಲಿ ಕಾಣಿಸಿಕೊಂಡ ತ್ರಿಷಾ, ವಿಜಯ್‌ಗಾಗಿ ಪ್ರಾರ್ಥನೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಕ್ಷಿಣ ಭಾರತದ ಜನಪ್ರಿಯ ನಟಿ ತ್ರಿಶಾ ಅವರು 43ನೇ ವಸಂತಕ್ಕೆ ಕಾಲಿಟ್ಟಿದ್ದು,ಈ ಹಿನ್ನೆಲೆ ಅವರು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷವು ಕೇಂದ್ರಬಿಂದುವಾಗಿದ್ದು, ಈಗಾಗಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ ಈ ಸಮಯದಲ್ಲೇ ಈ ಘಟನೆ ನಡೆದಿರುವುದು ಹಲವು ಊಹಾ ಪೋಹಾಗಳಿಗೆ ಕಾರಣವಾಗಿದೆ.

ನಟಿ ತ್ರಿಶಾ ತಮ್ಮ ಜನ್ಮದಿನದ ಹಿಂದಿನ ದಿನ ತಿರುಪತಿಗೆ ಪ್ರಯಾಣಿಸುತ್ತಿರುವ ವಿಡಿಯೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದರು. ಇನ್ನು ಇಂದು ಮುಂಜಾನೆ, ಅವರು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿವೆ.

ಅದರ ಬೆನ್ನಲ್ಲೇ, ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಪ್ರತಿಕ್ರಿಯೆಗಳು ಮಹಾಪೂರದಂತೆ ಹರಿದುಬಂದಿವೆ. ಕೆಲವರು ಅವರು ಈ ಸಮಯದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿರುವುದರ ಬಗ್ಗೆ ನಾನಾ ಊಹೆಗಳನ್ನು ವ್ಯಕ್ತಪಡಿಸಿದ್ದಾರೆ. ತಮಿಳುನಾಡು ಚುನಾವಣಾ ಫಲಿತಾಂಶದ ಮುನ್ನವೇ ಅವರು ಶ್ರೀ ವೆಂಕಟೇಶ್ವರ ಸ್ವಾಮಿಯ ಸನ್ನಧಿಯಲ್ಲಿ ಪ್ರಾರ್ಥಿಸಲು ನಿರ್ಧರಿಸಿರುವುದು, ನಟ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಯಶಸ್ಸಿಗಾಗಿ ಇರಬಹುದು ಎಂದು ನಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !