ಆರೆಸ್ಸೆಸ್ ಹಿರಿಯ ಮುಖಂಡ ಟಿ.ಆರ್.ಕೆ.ಭಟ್ ನಿಧನ

ದಿಗಂತ ವರದಿ ಕಾಸರಗೋಡು:

ಕಾಸರಗೋಡು ಜಿಲ್ಲೆಯ ಆರೆಸ್ಸೆಸ್ ಹಿರಿಯ ಮುಖಂಡ, ಪೆರ್ಲ ನಿವಾಸಿ ಟಿ.ಆರ್.ಕೆ. ಭಟ್ ಶುಕ್ರವಾರ ವಿಧಿವಶರಾಗಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕರಾಗಿದ್ದ ಅವರು, ಜನಸಂಘದಲ್ಲಿ ಸೇವೆ ಸಲ್ಲಿಸಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಅವರಿಗೆ ಕೆಲವು ತಿಂಗಳುಗಳ ಹಿಂದೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಮಂಜೇಶ್ವರ ಮಂಡಲ ಸೇರಿದಂತೆ ಕಾಸರಗೋಡು ಜಿಲ್ಲೆಯಲ್ಲಿ ಬಿಜೆಪಿಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಅಲ್ಲದೆ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಹಿತ ವಿವಿಧ ವಲಯಗಳಲ್ಲಿ ಕಾರ್ಯ ನಿರ್ವಹಿಸಿದ್ದರು.
ಮೃತರು ಪತ್ನಿ ಉಷಾ ಆರ್.ಕೆ.ಭಟ್, ಮಕ್ಕಳಾದ ಪುಷ್ಪಾ ಮೂಡುಬಿದಿರೆ, ಮಾಲಾ ತಿರುಪತಿ, ಸವಿತಾ ಮಂಗಳೂರು, ಚೇತನಾ ಪುತ್ತೂರು, ಪ್ರಸಾದ್ ಟಿ. ಪೆರ್ಲ, ಸುಷ್ಮಾ ಕೊಚ್ಚಿನ್, ಮನಮೋಹನ್ ಟಿ. ಮಂಗಳೂರು ಅವರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಜನಸಂಘದ ಕಾಲದಿಂದಲೂ ಸಕ್ರಿಯರಾಗಿದ್ದ ಅವರಿಗೆ ಕಳೆದ ವರ್ಷವಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!