ನೀಲಿತಾರೆಗೆ ಹೋಲಿಸಿ ಟ್ರೋಲ್: ನಮಗೆ ನ್ಯಾಯ ಕೊಡಿಸಿ ಎಂದು ಪ್ರಧಾನಿ ಮೊರೆ ಹೋದ ಗಾಯಕಿ ನೇಹಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಪ್ರಸಿದ್ಧ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ (Neha Singh Rathore) ಅವರು ತಮ್ಮ ನೋವನ್ನು ಪ್ರಧಾನಿ ಮೋದಿ ಸೇರಿದಂತೆ ಹಲವರಿಗೆ ಹೇಳಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾ ಮೂಲಕ ಮಹಿಳಾ ಆಯೋಗ, ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ತಮ್ಮ ಮೇಲೆ ಆಗುತ್ತಿರುವ ಶೋಷಣೆಯನ್ನು ಹೇಳಿಕೊಂಡಿದ್ದಾರೆ.

ಗಾಯಕಿ ನೇಹಾ ಮತ್ತು ನೀಲಿತಾರೆ ಮಿಯಾ ಖಲೀಫಾ ನೋಡೋಕೆ ಒಂದೇ ತರಹ ಇದ್ದಾರೆ ಎನ್ನುವ ಕಾರಣಕ್ಕಾಗಿ ಹೋಲಿಸಿ ಟ್ರೋಲ್ ಮಾಡಲಾಗುತ್ತಿದೆ. ಅನೇಕರು ಅದನ್ನು ಹಂಚಿಕೊಂಡಿದ್ದಾರೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಅವರು ಕೇಳಿಕೊಂಡಿದ್ದಾರೆ.

ಕಂಗನಾ ರಣಾವತ್ ಅವರಿಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಅವರು ಅವಮಾನಿಸಿದ್ದರು. ಇದನ್ನು ಮಹಿಳಾ ಆಯೋಗ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಪ್ರತಿಕ್ರಿಯೆ ನೀಡಿತ್ತು. ಹಾಗಾಗಿ ಮಹಿಳಾ ಆಯೋಗ ಮತ್ತು ಕೇಂದ್ರ ಸರಕಾರ ನಮ್ಮಂಥವರಿಗೆ ನ್ಯಾಯ ಕೊಡುತ್ತಾ ಎಂದು ಅವರು ಕೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!