Tuesday, July 5, 2022

Latest Posts

ಜೂ.9ರ ಮಧ್ಯರಾತ್ರಿಯಿಂದ ಮೀನುಗಾರಿಕೆಗೆ ನಿಷೇಧ: ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ವರದಿ, ಕಾಸರಗೋಡು:

ಕಾಸರಗೋಡು ಜಿಲ್ಲೆಯೂ ಸೇರಿದಂತೆ ಕೇರಳ ರಾಜ್ಯದ ಸಮುದ್ರ ಕರಾವಳಿಯಲ್ಲಿ ಜೂನ್ 9ರ ಮಧ್ಯರಾತ್ರಿ 12 ಗಂಟೆಯಿಂದ ಜುಲೈ 31ರ ಮಧ್ಯರಾತ್ರಿ 12 ಗಂಟೆ ವರೆಗಿನ 52 ದಿನಗಳ ಕಾಲ ಟ್ರೋಲಿಂಗ್ ನಿಷೇಧಿಸಲಾಗಿದೆ.
ಈ ಅವಧಿಯಲ್ಲಿ ಯಾಂತ್ರಿಕ ಬೋಟ್ ಗಳು ಸಮುದ್ರಕ್ಕೆ ತೆರಳಿ ಮೀನುಗಾರಿಕೆ ನಡೆಸಬಾರದು ಎಂದು ಕಾಸರಗೋಡು ಜಿಲ್ಲಾ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕೆಎಂಎಫ್ಆರ್ ಕಾಯ್ದೆ ಪ್ರಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
ಇದೇ ವೇಳೆ ಯಾವುದೇ ತುರ್ತು ಪರಿಸ್ಥಿತಿಗಳಲ್ಲಿ ಸಾರ್ವಜನಿಕರು ನಿಯಂತ್ರಣ ಕೊಠಡಿಯನ್ನು ದೂರವಾಣಿ ಸಂಖ್ಯೆ: 0467 – 2202537 ಅಥವಾ ಮೀನುಗಾರಿಕಾ ಸಹಾಯಕ ನಿರ್ದೇಶಕರನ್ನು ಮೊಬೈಲ್ ಸಂಖ್ಯೆ: 9496007034 ಮೂಲಕ ಸಂಪರ್ಕಿಸಬಹುದು. ಅಲ್ಲದೆ ಸಮುದ್ರದಲ್ಲಿ ನಡೆಯಬಹುದಾದ ಎಲ್ಲ ಅಪಾಯಗಳನ್ನು ಕಾಞಂಗಾಡಿನಲ್ಲಿರುವ ಜಿಲ್ಲಾ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರ ಕಾರ್ಯಾಲಯದಲ್ಲಿ ಚಟುವಟಿಕೆ ನಡೆಸುವ ನಿಯಂತ್ರಣ ಕೊಠಡಿಗೆ ಕರೆ ಮಾಡಿ ತಿಳಿಸಬೇಕೆಂದು ಮನವಿ ಮಾಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss