ನಟ ದರ್ಶನ್‌ಗೆ ಮತ್ತೆ ಸಂಕಷ್ಟ: ಸುಪ್ರೀಂಕೋರ್ಟ್‌ಗೆ 1492 ಪುಟಗಳ ದಾಖಲೆ ಸಲ್ಲಿಸಿದ ಪೊಲೀಸರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗಿದ್ದು, ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ ಪೊಲೀಸರು ಅರ್ಜಿ ಸಲ್ಲಿಸಿದ್ದಾರೆ.

ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿದೆ.

ಹೈಕೋರ್ಟ್ ಜಾಮೀನು ಆದೇಶ, ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಮತ್ತು ದೂರಿನ ಪ್ರತಿ, ಮರಣೋತ್ತರ ಪರೀಕ್ಷೆಯ ವರದಿ, ಆರೋಪಿಗಳ ಗ್ರೌಂಡ್ಸ್ ಆಫ್ ಅರೆಸ್ಟ್, ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯ ತರ್ಜುಮೆ ಪ್ರತಿ. ಪ್ರತ್ಯಕ್ಷ ದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ.

ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ ಒಟ್ಟು 1492 ಪುಟಗಳ ಕಡತವನ್ನು ಕೋರ್ಟ್‌ಗೆ ನೀಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!