ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಂಕಷ್ಟ ಎದುರಾಗಿದೆ.
ಸಚಿವ ಜಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ, ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಹಾಗೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ತನಿಖೆಗೆ ಆದೇಶ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಸಚಿವ ಜಮೀರ್ ಅಹ್ಮದ್, ಇದು ರಾಜಕೀಯ ಪ್ರೇರಿತ. ಕೋರ್ಟ್ ತೀರ್ಪು ರಾಜಕೀಯ ಆದೇಶ ಎಂದು ಲಘುವಾಗಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.