ಬಿಹಾರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಕ್‌ ಅಪಘಾತ: 8 ಮಂದಿ ದುರ್ಮರಣ 6 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಬ್ಬಿಣದ ರಾಡ್‌ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ 8 ಮಂದಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯು ಬಿಹಾರದ ಪೂರ್ನಿಯಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-57ರಲ್ಲಿ ನಡೆದಿದೆ.

ಇವರೆಲ್ಲರೂ ವಲಸೆ ಕಾರ್ಮಿಕರಾಗಿದ್ದು ರಾಜಸ್ಥಾನದ ಉದಯಪುರದ ಖೌರ್ವಾರ್ಹಾನಿವಾಸಿಗಳು ಎಂದು ಪೋಲೀಸರು ಗುರುತಿಸಿದ್ದಾರೆ. ಲಾರಿಯು ಪಶ್ಚಿಮ ಬಂಗಾಳದ ಸಿಲಿಗುರಿಯಿಂದ ಜಮ್ಮುವಿಗೆ ಹೋಗುತ್ತಿತ್ತು ಎನ್ನಲಾಗಿದೆ. ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಬದಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಪೂರ್ಣಿಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ವರದಿ ಮಾಡಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!