ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಡ್ಯದಲ್ಲಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ಲಾರಿಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ಇಂದು ಮುಂಜಾನೆ ನಡೆದಿದೆ.

ಅಪಘಾತದಲ್ಲಿ ಹೇಮಂತ್, ನವೀನ್, ಶರತ್ ಸೇರಿದಂತೆ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.

ಲಾರಿಯ ಹಿಂಬದಿಗೆ ಕಾರು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!