Friday, August 12, 2022

Latest Posts

ಟ್ರಕ್- ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ವೇಗವಾಗಿ ಚಲಿಸುತ್ತಿದ್ದ ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಪೂರ್ವ ಗೋದಾವರಿಯಲ್ಲಿ ನಡೆದಿದೆ.
ತಲರೇವ್ ಮಂಡಲ್ ಪದ್ದವಲಸದಿಂದ ರಾಜಮಂಡ್ರಿಗೆ ಹೋಗುತ್ತಿದ್ದ ವೇಳೆ ಪೂರ್ವ ಗೋದಾವರಿಯ ಪೆದ್ದಾಪುರಂ ಪಟ್ಟಣದ ಎಡಿಬಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಅಪಘಾತಕ್ಕೀಡಾದವರನ್ನು ಪೆಡ್ಡಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ  ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss