ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಟ್ರಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಉಂಟಾದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ರಾಹುಲ್ ಕುಮಾರ್ (25), ವಿನಯ್ ಶರ್ಮಾ (27), ಆಕಾಶ್ (22) ಮತ್ತು ಗೋಪಾಲ್ (24) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಎದುರಿಗೆ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಟ್ರಕ್ ಅನ್ನು ಅಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಸದ್ಯ ಪೊಲೀಸರು ಟ್ರಕ್ ಅನ್ನು ವಶಪಡಿಸಿಕೊಂಡಿದ್ದು, ಚಾಲಕನಿಗಾಗಿ ಹುಡುಕಾಟ ಮುಂದುವರಿಸಿದ್ದಾರೆ.