ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಕವಲಿ ಗ್ರಾಮಾಂತರ ಮಂಡಲದ ಮುಸುನೂರು ಟೋಲ್ ಪ್ಲಾಜಾ ಬಳಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದೆ.
ವೇಗವಾಗಿ ಬಂದ ಕಾರು ಲಾರಿಗೆ ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.