ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರೀ ಪ್ರಮಾಣದಲ್ಲಿ ತುಂಬಿದ್ದ ಡಂಪರ್ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದು ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ.
ಅವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ 12.15ರ ಸುಮಾರಿಗೆ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ 25 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸ್ಥಳೀಯ ನಿವಾಸಿಗಳ ಪ್ರಕಾರ, ರಾತ್ರಿ ಬಸ್ ಪ್ರಯಾಣಿಕರು ಊಟಕ್ಕೆ ಶಹಜಹಾನ್‌ಪುರದಲ್ಲಿ ಇಳಿದರು. ಆಗ ಹಿಂಬದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ.
ಈ ಅಪಘಾತದಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.