Friday, July 1, 2022

Latest Posts

ಯೋಧನ ಮೃತದೇಹ ಹಸ್ತಾಂತರಿಸಿ ಹಿಂದಿರುಗುವ ವೇಳೆ ಪೊಲೀಸರಿಗಾಗಿಯೇ ಕಾದಿದ್ದ ಜವರಾಯ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಪೊಲೀಸ್​ ಜೀಪ್​ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಬ್​ ಇನ್ಸ್​ಪೆಕ್ಟರ್​ ಸೇರಿದಂತೆ ನಾಲ್ವರು ಸಶಸ್ತ್ರ ಮೀಸಲು ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.

ಈ ದುರ್ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಸಾ ಬಳಿಯಿರುವ ಹೆದ್ದಾರಿ-16ರಲ್ಲಿ ನಡೆದಿದೆ.

ಜೆ. ಕೃಷ್ಣುಡು (ಎಆರ್​-ಎಸ್​ಐ) (58), ವೈ ಬಾಬು ರಾವ್​ (53), ಟಿ. ಆಂಟೋನಿ (50) (ಹೆಡ್​ ಕಾನ್ಸ್​ಟೇಬಲ್​ಗಳು​) ಮತ್ತು ಪಿ. ಜನಾರ್ಧನ ರಾವ್​ (ಕಾನ್ಸ್​ಟೇಬಲ್​-ಚಾಲಕ) (47) ಮೃತ ದುರ್ದೈವಿಗಳು.

‘ಹುತಾತ್ಮ ಯೋಧನ ಪಾರ್ಥೀವ ಶರೀರವನ್ನು ಭೈರಿ ಸಾರಂಗಪುರಂನಲ್ಲಿರುವ ಅವರ ಕುಟುಂಬಕ್ಕೆ ಹಸ್ತಾಂತರಿಸಿ ಶ್ರೀಕಾಕುಳಂಗೆ ಹಿಂತಿರುಗುವಾಗ ಈ ಭೀಕರ ಅಪಘಾತ ಸಂಭವಿಸಿದೆ. ನಾಲ್ವರು ಸಿಬ್ಬಂದಿಯನ್ನು ಕಳೆದುಕೊಂಡಿರುವುದು ಪೊಲೀಸ್​ ಇಲಾಖೆಗೆ ನಷ್ಟವಾಗಿದೆ ಎಂದು ಪೊಲೀಸ್​ ಮಹಾನಿರ್ದೇಶಕ ಡಿ. ಗೌತಮ್​ ಸಾವಂಗ್​ ಹೇಳಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಿ ಆದಷ್ಟು ಬೇಗ ವರದಿ ಸಲ್ಲಿಸುವಂತೆ ಡೆಪ್ಯುಟಿ ಇನ್ಸ್​ಪೆಕ್ಟರ್​ ಜನರಲ್​ ಮತ್ತು ಶ್ರೀಕಾಕುಳಂ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಡಿಜಿಪಿ ಸೂಚನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss