ರಾಂಗ್ ಸೈಡ್‌ನಿಂದ ಬಂದು ಎಸ್‌ಯುವಿಗೆ ಡಿಕ್ಕಿ ಹೊಡೆದ ಟ್ರಕ್‌: ಆರು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ರಾಂಗ್ ಸೈಡ್‌ನಿಂದ ಬಂದ ಟ್ರಕ್  ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ, 7 ಜನರು ಗಾಯಗೊಂಡಿದ್ದಾರೆ. ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾನುಪ್ರತಾಪುರ-ದಳ್ಳಿರಾಜರ ರಸ್ತೆಯ ಚೌರಪವಾಡ ಬಳಿ ಮುಂಜಾನೆ ಅಪಘಾತ ಸಂಭವಿಸಿದೆ.

ಎದುರಿನಿಂದ ಬರುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ರಾಜನಂದಗಾಂವ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಅಪಘಾತದ ಬಗ್ಗೆ ವಿವರಗಳನ್ನು ಒದಗಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಶೋಕ್ ಜೋಶಿ, ಆರೋಪಿ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಆತನ ಶೋಧ ಮುಂದುವರೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ತೀವ್ರವಾಗಿ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರ ನೆರವಿನಿಂದ ಗಂಟೆಗಟ್ಟಲೆ ಪ್ರಯತ್ನದ ಬಳಿಕ ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯಲಾಯಿತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!