July 23, 2026
Thursday, July 23, 2026
spot_img

ಯಮರೂಪಿಯಾಗಿ ಬಂದ ಟ್ರಕ್: ಕೆಲಸ ಮುಗಿಸಿ ಹೊರಟ 8 ಮಹಿಳಾ ಕಾರ್ಮಿಕರು ಸೇರಿದ್ದು ಮಸಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ನಾಗ್ಪುರ–ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ಮಹಿಳಾ ಕಾರ್ಮಿಕರ ಗುಂಪೊಂದು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಚ್ಛತಾ ಕೆಲಸ ಮುಗಿಸಿ ಟೆಂಪೊದಲ್ಲಿ ಮನೆಗೆ ಮರಳಲು ಸಿದ್ಧರಾಗಿದ್ದರು. ಈ ವೇಳೆ ಮುಂಬೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಟ್ರಕ್ ಹಿಂಬದಿಯಿಂದ ಬಂದು ಟೆಂಪೊಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಏಳು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಇದನ್ನೂ ಓದಿ:

ಅಪಘಾತದಲ್ಲಿ ಮೃತಪಟ್ಟವರು ಜಾಲ್ನಾ ತಾಲ್ಲೂಕಿನ ನಿವಾಸಿಗಳಾಗಿದ್ದು, ಅವರ ಗುರುತುಗಳನ್ನು ಪೊಲೀಸರು ದೃಢಪಡಿಸಿದ್ದಾರೆ. ಇನ್ನೂ ಒಬ್ಬ ಮಹಿಳೆಯ ಗುರುತು ಪತ್ತೆ ಮಾಡುವ ಕಾರ್ಯ ಮುಂದುವರಿದಿದೆ. ಗಾಯಗೊಂಡ ಮೂವರು ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಳಿಕ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಲಾಗಿದೆ. ಈ ದುರಂತದ ಬಗ್ಗೆ ಮಹಾರಾಷ್ಟ್ರದ ಪರಿಸರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪಂಕಜಾ ಮುಂಡೆ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !