ದುರ್ಗಾ ಮಾತೆಯ ವಿಸರ್ಜನೆ ವೇಳೆ ಉರುಳಿದ ಟ್ರಕ್: ಇಬ್ಬರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದುರ್ಗಾ ದೇವಿಯ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ನಡೆಯುತ್ತಿದ್ದ ಜನರ ಮೇಲೆ ಟ್ರಕ್ ಉರುಳಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಟ್ರಕ್ ಇಳಿಜಾರಿನಲ್ಲಿ ನಿಂತಿದ್ದ ವೇಳೆ ಜನರ ಮೇಲೆ ಉರುಳಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇನ್ನು ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಇಬ್ಬರ ಸಾವಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!