ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಓವರ್‌ಲೋಡ್ ಟ್ರಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಪಕ್ಕದಲ್ಲೇ ಸಾಗುತ್ತಿದ್ದ ಬೊಲೆರೋ ವಾಹನ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೆದ್ದಾರಿಯಲ್ಲಿ ಹೊಟ್ಟು ಸಾಗಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದ ತಕ್ಷಣ ಟ್ರಕ್ ಪಲ್ಟಿಯಾಗಿ ನೇರವಾಗಿ ಬೊಲೆರೋ ಮೇಲೆ ಬಿದ್ದಿದೆ. ಪರಿಣಾಮವಾಗಿ ಬೊಲೆರೋ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.
ಘಟನೆ ತಿಳಿದ ತಕ್ಷಣ ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಜೆಸಿಬಿ ಸಹಾಯದಿಂದ ಟ್ರಕ್ ಅನ್ನು ಮೇಲೆತ್ತಲಾಗಿದ್ದು, ಬೊಲೆರೋ ಒಳಗೆ ಸಿಲುಕಿದ್ದ ಚಾಲಕನ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು.

