ಹೊಸದಿಗಂತ ಡಿಜಿಟಲ್ ಡೆಸ್ಕ್:
ವೇಗವಾಗಿ ಬಂದ ಟ್ರಕ್ವೊಂದು ರಸ್ತೆಬದಿ ನಿಂತಿದ್ದ ಶಾಲಾ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ನಡೆದಿದೆ.
ಶಾಲಾ ಬಸ್ನಲ್ಲಿ ಸುಮಾರು 50 ಮಕ್ಕಳು ಮತ್ತು 6 ಶಿಕ್ಷಕರು ಇದ್ದರು. ಆಗ್ರಾದಿಂದ ಕೌಶಂಬಿಗೆ ಶಾಲಾ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ, ಹಿಂದಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್, ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಹಲವಾರು ಮಕ್ಕಳು ಗಾಯಗೊಂಡಿದ್ದು, ಸ್ಥಳದಲ್ಲಿ ಭೀತಿ ಉಂಟಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡು ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನ ಆಂಬುಲೆನ್ಸ್ ಮೂಲಕ ತಿರ್ವಾದ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು. ಸದ್ಯ ಮಕ್ಕಳ ಸ್ಥಿತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.



