Thursday, September 11, 2025

ಹತ್ಯೆಗೀಡಾದ ಚಾರ್ಲಿ ಕಿರ್ಕ್‌ಗೆ ಅಮೆರಿಕದ ಅತ್ಯುನ್ನತ ಗೌರವ ಘೋಷಿಸಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಸಂಪ್ರದಾಯವಾದಿ ಕಾರ್ಯಕರ್ತ ಚಾರ್ಲಿ ಕಿರ್ಕ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಪ್ರೆಸಿಡೆನ್ಶಿಯಲ್ ಮೆಡಲ್ ಆಫ್ ಫ್ರೀಡಮ್ ಅನ್ನು ನೀಡುವುದಾಗಿ ಹೇಳಿದ್ದಾರೆ.

ಟ್ರಂಪ್ ಕಿರ್ಕ್ ಅವರನ್ನು ನೆನಪಿಸಿಕೊಳ್ಳುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಅವರನ್ನು ನಿಕಟ ಮಿತ್ರ ಮತ್ತು ಸ್ಫೂರ್ತಿ ಎಂದು ಬಣ್ಣಿಸಿದರು. “ಚಾರ್ಲಿ ಕಿರ್ಕ್ ಅವರ ಘೋರ ಹತ್ಯೆಯಲ್ಲಿ ಅನೇಕ ಅಮೆರಿಕನ್ನರು ಅನುಭವಿಸಿದ ಭಯಾನಕತೆ ಮತ್ತು ದುಃಖವನ್ನು ನಾನು ವ್ಯಕ್ತಪಡಿಸುತ್ತೇನೆ” ಎಂದು ಅವರು ಹೇಳಿದರು.

“ಚಾರ್ಲಿ ತಮ್ಮ ಪೀಳಿಗೆಯ ದೈತ್ಯ, ಸ್ವಾತಂತ್ರ್ಯದ ಪ್ರತಿಪಾದಕರಾಗಿದ್ದರು ಮತ್ತು ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದರು” ಎಂದು ಟ್ರಂಪ್ ಹೇಳಿದ್ದಾರೆ. “ನಾವು ಚಾರ್ಲಿ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ಆದರೆ, ಚಾರ್ಲಿ ಅಸಂಖ್ಯಾತ ಜನರ ಹೃದಯಗಳಲ್ಲಿ ಅದರಲ್ಲೂ ವಿಶೇಷವಾಗಿ ಯುವಜನರ ಹೃದಯಗಳಲ್ಲಿ ಇಟ್ಟ ಧೈರ್ಯವು ಜೀವಂತವಾಗಿರುತ್ತದೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ” ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದನ್ನೂ ಓದಿ