ಹೊಸದಿಗಂತ ಡಿಜಿಟಲ್ ಡೆಸ್ಕ್:
Make America Great Again ಮಾಡುವ ಕನಸು ಕಾಣುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುತ್ತಿರುವ ಸರಕುಗಳಿಗೆ ಸುಂಕ ವಿಧಿಸುವ ‘ಪ್ರತಿ ಸುಂಕ’ ನೀತಿಯನ್ನು ಘೋಷಿಸಿದ್ದಾರೆ.
ಶ್ವೇತಭವನದ ರೋಸ್ ಗಾರ್ಡನ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಟ್ರಂಪ್ ಪ್ರತಿ ಸುಂಕ ನೀತಿಯ ವಿವರಗಳನ್ನು ತಿಳಿಸಿದರು. ಭಾರತ ಮತ್ತು ಚೀನಾ ನಮಗೆ ವಿಧಿಸುವ ತೆರಿಗೆ ಪೈಕಿ ನಾವು ಅರ್ಧದಷ್ಟು ವಿಧಿಸುವ ಮೂಲಕ ದಯೆ ತೋರುತ್ತಿದ್ದೇವೆ. ಅಮೆರಿಕವು ಭಾರತದ ಮೇಲೆ 26% ಮತ್ತು ಚೀನಾದ ಮೇಲೆ 34% ರಷ್ಟು ಆಮದು ಸುಂಕವನ್ನು ವಿಧಿಸುತ್ತದೆ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಇತ್ತೀಚಿಗೆ ಅಮೆರಿಕಕ್ಕೆ ಆಗಮಿಸಿದ್ದರು. ಅವರು ನನ್ನ ಉತ್ತಮ ಸ್ನೇಹಿತ. ಆದರೆ ನಾನು ಅವರಲ್ಲಿ ನೀವು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದೇನೆ. ಭಾರತ ನಮಗೆ 52% ರಷ್ಟು ಸುಂಕ ವಿಧಿಸುತ್ತದೆ. ಆದ್ದರಿಂದ ನಾವು ಅವರಿಗೆ ಅದರ ಅರ್ಧದಷ್ಟು ಅಂದರೆ 26% ಪ್ರತಿಶತ ಸುಂಕವನ್ನು ವಿಧಿಸುತ್ತೇವೆ ಎಂದರು.