ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಡೀ ಜಗತ್ತು ನಿಮ್ಮನ್ನು ಪ್ರೀತಿಸುತ್ತಿದೆ ಎಂದು ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಿಪಬ್ಲಿಕನ್ ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಇಬ್ಬರೂ ನಾಯಕರು ವಿಶ್ವ ಶಾಂತಿಗಾಗಿ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದಾರೆ. ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಅಮೆರಿಕ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡುವ ಬಯಕೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದರು.
ಮಾತುಕತೆಯ ವೇಳೆ ಟ್ರಂಪ್ ಅವರು ಪ್ರಧಾನಿ ಮೋದಿಯವರಿಗೆ ತಾವು ಮತ್ತು ಭಾರತ ನಿಜವಾದ ಸ್ನೇಹಿತರು ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ತನ್ನ ಗೆಲುವಿನ ನಂತರ ಮಾತನಾಡಿದ ಮೊದಲ ವಿಶ್ವ ನಾಯಕ ಮೋದಿ ಎಂದು ಟ್ರಂಪ್ ಹೇಳಿದ್ದಾರೆ.
ಇಡೀ ಜಗತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತಿದೆ. ಅಧ್ಯಕ್ಷ ಟ್ರಂಪ್ ಭಾರತವನ್ನು ಶ್ರೇಷ್ಠ ದೇಶ ಮತ್ತು ಪ್ರಧಾನಿ ಮೋದಿ ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದ್ದಾರೆ.