October 15, 2026
Thursday, October 15, 2026
spot_img

ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಗೆ ಹೊಸ ಸುಂಕದ ಬರೆ ಎಳೆದ ಟ್ರಂಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದೊಂದು ತಿಂಗಳಿನಿಂದ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿದ್ದ ಯುದ್ದಕ್ಕೆ ಕೊನೆಗೂ ಕದನ ವಿರಾಮ ಘೋಷಣೆಯಾಗಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಡೊನಾಲ್ಡ್ ಟ್ರಂಪ್ ಹೊಸ ಶಾಕಿಂಗ್ ಸುದ್ದಿ ನೀಡಲು ಮುಂದಾಗಿದ್ದು, ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸುವ ದೇಶಗಳ ಮೇಲೆ ಶೇ. 50 ರಷ್ಟು ಸುಂಕ ವಿಧಿಸುವುದಾಗಿ ಘೋಷಿಸಿದ್ದಾರೆ.

ಟ್ರೂತ್ ಸೋಶಿಯಲ್ ಖಾತೆಯಲ್ಲಿ ಈ ಸ್ಫೋಟಕ ಮಾಹಿತಿ ಹಂಚಿಕೊಂಡಿರುವ ಟ್ರಂಪ್, ಇರಾನ್‌ಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಂದ ಅಮೆರಿಕಕ್ಕೆ ರಫ್ತು ಆಗುವ ಎಲ್ಲಾ ಸರಕುಗಳ ಮೇಲೆ ತಕ್ಷಣವೇ ಶೇ. 50 ರಷ್ಟು ಸುಂಕವನ್ನು ವಿಧಿಸಲಾಗುತ್ತದೆ. ಈ ನಿರ್ಧಾರದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಖಡಕ್ ಆಗಿ ತಿಳಿಸಿದ್ದಾರೆ.

ಟ್ರಂಪ್ ಈ ನಿರ್ಧಾರದಿಂದ ಕದನ ವಿರಾಮದ ಸುದ್ದಿ ತಿಳಿದು ನೆಮ್ಮದಿಯಲ್ಲಿದ್ದ ರಾಷ್ಟ್ರಗಳಿಗೆ ದೊಡ್ಡ ಏಟು ಸಿಕ್ಕಂತಾಗಿದೆ.

Must Read