Thursday, December 4, 2025

ಮತ್ತೆ ಟ್ರಂಪ್ ಅದೇ ರಾಗ: ಭಾರತ-ಪಾಕ್ ಯುದ್ಧ ಕೊನೆಗೊಳಿಸಿದ್ದು ನಾನೇ ಎಂದ ಅಮೆರಿಕ ಅಧ್ಯಕ್ಷ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೆ ಭಾರತ-ಪಾಕಿಸ್ತಾನ ನಡುವಿನ ಸಂಘರ್ಷವನ್ನು ಕೊನೆಗೊಳಿಸಿದ್ದು ನಾನೇ ಎಂಬ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದು, ನೊಬೆಲ್ ಶಾಂತಿ ಪ್ರಶಸ್ತಿ ಕೊಡಬೇಕೆಂದು ಪ್ರತಿಪಾದಿಸಿದ್ದಾರೆ.

ಈವರೆಗೆ ನಾನು ಎಂಟು ಯುದ್ಧಗಳನ್ನು ನಿಲ್ಲಿಸಿದ್ದು, ಪ್ರತಿಯೊಂದಕ್ಕೂ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಕೊಡಬೇಕು ಎಂದು ಟ್ರಂಪ್ ಅವರು ಹೇಳಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧವನ್ನು ಉಲ್ಲೇಖಿಸಿ ಮಾತನಾಡಿರುವ ಟ್ರಂಪ್ ಅವರು, ನಾವು ಎಂಟು ಯುದ್ಧಗಳನ್ನು ಕೊನೆಗೊಳಿಸಿದ್ದೇವೆ. ಈಗ ಮತ್ತೊಂದು ಯುದ್ಧವನ್ನು ಅಂತ್ಯಗೊಳಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ನಾನು ರಷ್ಯಾ–ಉಕ್ರೇನ್ ನಡುವಿನ ಯುದ್ಧ ಕೊನೆಗೊಳಿಸಿದರೆ ನೊಬೆಲ್ ಪ್ರಶಸ್ತಿ ಸಿಗಲಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಆದರೆ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಇತರೆ ಎಂಟು ಯುದ್ಧಗಳನ್ನು ನಿಲ್ಲಿಸಿದ್ದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಆ ಎಂಟು ಯುದ್ಧ ನಿಲ್ಲಿಸಿದ್ದಕ್ಕಾಗಿ ಪ್ರತಿಯೊಂದಕ್ಕೂ ನೊಬೆಲ್ ಸಿಗಬೇಕಿದೆ’ ಎಂದಿದ್ದಾರೆ.

ಆದರೆ, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಹಸ್ತಕ್ಷೇಪವ್ನು ಭಾರತ ನಿರಾಕರಿಸಿದೆ.

error: Content is protected !!