ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷೀಯ ಚುನಾವಣೆ ರಂಗೇರಿದ್ದು ಮಾಜಿ ಅಧ್ಯಕ್ಷ, ರಿಪಬ್ಲಿಕ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮತ್ತು ಹಾಲಿ ಉಪಾಧ್ಯಕ್ಷೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ.
ಪೆನ್ಸಿಲ್ವೇನಿಯಾದಲ್ಲಿ ಎಬಿಸಿ ವಾಹಿನಿ ಆಯೋಜಿಸಿದ್ದ ಬಹಿರಂಗ ಚರ್ಚೆಯಲ್ಲಿ ಬಹಿರಂಗ ಚರ್ಚೆಯಲ್ಲಿ ಆರ್ಥಿಕತೆ, ವಲಸೆ ನೀತಿ, ಕ್ಯಾಪಿಟಲ್ ಹಿಲ್ ಗಲಭೆ ಇತ್ಯಾದಿ ವಿಚಾರಗಳ ಬಗ್ಗೆ ಇಬ್ಬರು ನಾಯಕರು ಮಾತನಾಡಿದರು.
ಕಮಲಾ ಹ್ಯಾರಿಸ್ ಮಾರ್ಕ್ಸ್‌ವಾದಿಯಾಗಿದ್ದಾರೆ. ಅವರ ತಂದೆ ಮಾರ್ಕ್ಸ್‌ವಾದವನ್ನು ಕಲಿಸಿಕೊಟ್ಟಿದ್ದಾರೆ. ಅವರ ಹುಚ್ಚು ನೀತಿಯಿಂದ ದೇಶ ನಾಶವಾಗಿದೆ ಎಂದು ಟ್ರಂಪ್ ಟೀಕಿಸಿದರು. ಡೊನಾಲ್ಡ್ ಟ್ರಂಪ್ ಲಕ್ಷಾಂತರ ಜನರನ್ನು ವಜಾಗೊಳಿಸಿದ್ದಾರೆ. ಕೆಟ್ಟ ಉದ್ಯೋಗ ನೀತಿಯಿಂದ ದೇಶ ಸಮಸ್ಯೆಗೆ ಸಿಲುಕಿತ್ತು. ಟ್ರಂಪ್ ಅವಧಿಯಲ್ಲಿ ಆಗಿದ್ದ ಅವ್ಯವಸ್ಥೆಯನ್ನು ನಮ್ಮ ಅವಧಿಯಲ್ಲಿ ನಾವು ಸ್ವಚ್ಛ ಮಾಡಿದ್ದೇವೆ ಎಂದು ಹ್ಯಾರಿಸ್ ತಿರುಗೇಟು ನೀಡಿದರು.
Our @ABC political panel weighs in on the moment that Vice Pres. Kamala Harris and former Pres. Donald Trump shook hands during the start of the #ABCdebate:
“She walked over to him and sought him out.” pic.twitter.com/QpA9PsP1U4
— ABC News (@ABC) September 11, 2024