ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್ ಶಾಂತಿ ಒಪ್ಪಂದದ ಬಗ್ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ನಾಳೆ ಮಾತನಾಡಲಿದ್ದಾರೆ ಎನ್ನಲಾಗಿದೆ.
ಕಳೆದ ವಾರ ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವಿನ ಮಾತುಕತೆ ವಿಫಲವಾದಾಗ ಶಾಂತಿ ಒಪ್ಪಂದದ ಕುರಿತು ಟ್ರಂಪ್ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತನಾಡುವುದಿಲ್ಲ ಎಂದು ಅಂದುಕೊಂಡಿದ್ದರು.
ಫ್ಲೋರಿಡಾದಿಂದ ವಾಷಿಂಗ್ಟನ್‌ಗೆ ಏರ್ ಫೋರ್ಸ್ ಒನ್‌ನಲ್ಲಿ ಹಾರಾಟ ನಡೆಸುವಾಗ ಟ್ರಂಪ್ ವರದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ. ಯುದ್ಧವನ್ನು ಕೊನೆಗೊಳಿಸಲು ಸಾಧ್ಯವೇ ಎಂಬುದನ್ನು ನೋಡಬೇಕಿದೆ, ಸಾಕಷ್ಟು ಕೆಲಸಗಳನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.